ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ: ವಿದ್ಯಾರ್ಥಿನಿಗೆ ಗಂಭೀರ ಗಾಯ
Update: 2024-01-10 22:49 IST
ಬಂಟ್ವಾಳ: ಸರಕಾರಿ ಬಸ್‌ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಢಿಕ್ಕಿ ಹೊಡೆದ ಘಟನೆ ವಗ್ಗದಲ್ಲಿ ನಡೆದಿದೆ.
ಘಟನೆಯಿದ ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಪಲ್ಯ ಎಂಬವರ ಪುತ್ರಿ ಪಲ್ಲವಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಎರಡು ಬಸ್ ಗಳು ಕೆಳಗಿನ ವಗ್ಗ ತಿರುವಿನಲ್ಲಿ ಹಿಂದಿಕ್ಕುವ ಭರದಲ್ಲಿ ಬಂಟ್ವಾಳ ಕಡೆಯಿಂದ ವಾಮದಪದವು ಕಾಲೇಜಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.