×
Ad

ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಪವನ್ ಕುಮಾರ್

Update: 2024-01-12 17:32 IST

ಪಡುಬಿದ್ರಿ: ಉಡುಪಿ ವಲಯದ ಫಲಿತಾಂಶವನ್ನು ಹೆಚ್ಚು ಮಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ಹಾಗೂ ಮಾರ್ಗದರ್ಶನ ನೀಡಿದಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಸಂಯೋಜಕ ಪವನ್ ಕುಮಾರ್ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಪಡುಬಿದ್ರಿ ಕೆಪಿಎಸ್ ಶಾಲೆಯಲ್ಲಿ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಮತ್ತು ಕೆಪಿಎಸ್ ಪಡುಬಿದ್ರಿ ಪ್ರೌಢಶಾಲಾ ವಿಭಾಗ ಸಹಭಾಗಿತ್ವದಲ್ಲಿ ನಡೆದ ಸಮಾಜ ವಿಜ್ಞಾನ ಶಿಕ್ಷಕರ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿ ತರಬೇತಿಯಲ್ಲಿಯೂ ಶಿಕ್ಷಕರ ಪಾಲು ಬರೆದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಶಿಕ್ಷಕರಿಗೆ ಕರೆ ನೀಡಿದರು.

ಪಡುಬಿದ್ರಿ ಕೆಪಿಎಸ್ ಶಾಲೆಯ ಪ್ರಾಂಶುಪಾಲ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೃಷ್ಣಯ್ಯ ಹಾಗೂ ಉಡುಪಿ ಸಮಾಜ ವಿಜ್ಞಾನ ಶಿಕ್ಷಕ ಸಂಘದ ಅಧ್ಯಕ್ಷೆ ಶಾಲಿನಿ, ಸಂಪನ್ಮೂಲ ವ್ಯಕ್ತಿಗಳಾದ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶೇಖರ್ ಭೋವಿ, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಯಶೋಧ ಉಪಸ್ಥಿತರಿದ್ದರು. ಕೆಪಿಎಸ್ ಹಿರಿಯ ಶಿಕ್ಷಕಿ ಗೀತಾ ಶೆಟ್ಟಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಉಚ್ಚಿಲ ಸರಸ್ವತಿ ಮಂದಿರ ಪ್ರೌಢಶಾಲೆಯ ಬಾಬುರಾಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News