×
Ad

ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಪರ ಮಾತನಾಡುತ್ತಿಲ್ಲ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

Update: 2024-01-12 20:34 IST

ಮಂಗಳೂರು: ಕೇಂದ್ರದಿಂದ ಕರ್ನಾಟಕಕ್ಕೆ ಬಹಳಷ್ಟು ಅನ್ಯಾಯವಾಗುತ್ತದೆ. ಆದರೆ ಎಷ್ಟೇ ಅನ್ಯಾಯವಾಗಿದ್ದರೂ, ದಿಲ್ಲಿಯಲ್ಲಿ ಕರ್ನಾಟಕದ ಒಬ್ಬನೇ ಒಬ್ಬ ಸಂಸದ ರಾಜ್ಯದ ಪರ ಮಾತನಾಡುತ್ತಿಲ್ಲ. ಬೆಂಗಳೂರಿಗೆ ಬಂದು ರಾಜ್ಯ ಸರ ಕಾರದ ವಿರುದ್ದವೇ ಮಾತನಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಜ.21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ನ ರಾಜ್ಯಮಟ್ಟದ ಬೃಹತ್ ಸಮಾವೇಶಕ್ಕೆ ಸಂಬಂಧಿಸಿ ಶುಕ್ರ ವಾರ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‌ನ ಕಾರ್ಯಕರ್ತರ ಪೂರ್ವತಯಾರಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ಗೆ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ. ರಾಜ್ಯದ ಎಲ್ಲ ಜನರು ಎಲ್ಲವನ್ನು ಗಮನಿಸ್ತುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ ಎಂದು ಹೇಳಿದರು..

ಕೇಂದ್ರದಿಂದ ಬರಗಾಲ, ಅನುದಾನ ಬಿಡುಗಡೆ , ತೆರಿಗೆ ಸಂಬಂಧಿಸಿ ರಾಜ್ಯಕ್ಕೆ ಬರಬೇಕಾದ ಪಾಲು ಮತ್ತು ರಾಜ್ಯಕ್ಕೆ ಆಗಿ ರುವ ಅನ್ಯಾಯದ ಬಗ್ಗೆ ಲೋಕಸಭೆಯಲ್ಲಿ ಕರ್ನಾಟಕದ ಪರ ಬಿಜೆಪಿಯ ಸಂಸದರು ಮೌನ ವಹಿಸಿದ್ದಾರೆ. ಎಲ್ಲ ಹಂತದಲ್ಲೂ ಅನ್ಯಾಯವಾದಾಗ ಕರ್ನಾಟಕದ ಪರ ಒಬ್ಬನೇ ಒಬ್ಬ ಸಂಸದ ವಕಾಲತ್ತು ವಹಿಸುತ್ತಿಲ್ಲ. ವಹಿಸುವುದಿಲ್ಲ. ಅವರಿಗೆ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಲು ಧೈರ್ಯ ಇಲ್ಲ ಎಂದು ದೂರಿದರು.

ಕರ್ನಾಟಕದ ಬೆಳವಣಿಗೆಗೆ ಸಂಬಂಧಿಸಿ ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ ಎಂದರು.

ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಉನ್ನತ ಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ. ನುಡಿದಂತೆ ನಡೆದಿ ದ್ದೇವೆ. ಚುನಾವಣೆಯ ಮೊದಲು ನೀಡಲಾಗಿದ್ದ ಎಲ್ಲ ಗ್ಯಾರಂಟಿಗಳನ್ನು ರಾಜ್ಯ ಸರಕಾರ ಜಾರಿಗೊಳಿಸಿದೆ. ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಲೋಕಸಭೆಯಲ್ಲಿ ಕಾಂಗ್ರೆಸ್‌ನ ಹೆಚ್ಚು ಸಂಸದರು ಇರಬೇಕಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್‌ನ ಹೆಚ್ಚು ಸಂಸದರು ಲೋಕಸಭೆ ಪ್ರವೇಶಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮಾತನಾಡಿ ಜ.21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಬೃಹತ್ ಸಮಾವೇಶಕ್ಕೆ ಸಂಬಂಧಿಸಿ ಶುಕ್ರವಾರ ಕಾಂಗ್ರೆಸ್ ಭವನದಲ್ಲಿ ನಡೆದ ಪೂರ್ವತಯಾರಿ ಸಭೆಯಲ್ಲಿ ದ.ಕ. ಉಡುಪಿ ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಬ್ಲಾಕ್ ಅಧ್ಯಕ್ಷರು ಭಾಗವಹಿಸಿದ್ದರು.

ಇಂದಿನ ಸಭೆಯಲ್ಲಿ ಕೇವಲ ಸಮಾವೇಶಕ್ಕೆ ಸಂಬಂಧಿಸಿ ಮಾತ್ರ ಚರ್ಚೆ ನಡೆದಿದೆ. ಚುನಾವಣೆಗೆ ಸಂಬಂಧಿಸಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳೀದರು.

ಕಾಂಗ್ರೆಸ್‌ನ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯ ಮಂತ್ರಿ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News