×
Ad

ದೇಸಿ ಕ್ರೀಡೆಗಳನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿಸಿ: ಸುನಿಲ್ ಕುಮಾರ್

Update: 2024-01-12 21:29 IST

ಕಾರ್ಕಳ : ಕಾರ್ಕಳ ತಾಲೂಕು ಕ್ರೀಡಾ ಭಾರತಿ ವತಿಯಿಂದ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರ್ಕಳ ಘಟಕದ ಸಹಯೋಗದಿಂದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ದೈಹಿಕ ಶಿಕ್ಷಕರಿಗಾಗಿ ಪುರುಷರಿಗೆ ವಾಲಿಬಾಲ್ ಮಹಿಳೆಯರಿಗೆ ತ್ರೋಬಾಲ್ ಹಾಗೂ ಪುರುಷ ಹಾಗೂ ಮಹಿಳೆಯರಿಗೆ ಹಗ್ಗ ಜಗ್ಗಾಟ ಪಂದ್ಯಾಟ ಕಾರ್ಕಳ ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕಾರ್ಕಳ ತಾಲೂಕಿನ ಶಾಸಕ ವಿ. ಸುನಿಲ್ ಕುಮಾರ್ ಅವರು ಉದ್ಘಾಟಿಸಿ ಶಾಲೆಗಳಲ್ಲಿ ಮಕ್ಕಳಿಗೆ ಉಳಿದ ಕ್ರೀಡೆಯ ಜೊತೆ ಈಗ ನಶಿಸಿಹೋಗುತ್ತಿರುವ ದೇಸಿ ಕ್ರೀಡೆಗಳನ್ನು ಪರಿಚಯಿಸಿ ಪ್ರೋತ್ಸಾಹಿಸಬೇಕು ಎಂದರು. ಕ್ರೀಡಾ ಭಾರತಿಯ ವಿಭಾಗ ಸಂಯೋಜಕರಾದ ಶ್ರೀ ಪ್ರಸನ್ನ ಶೆಣೈ ಕಾರ್ಕಳ ಪ್ರಸ್ತಾವನೆಗೈದರು.

ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಪುರಸಭಾ ಸದಸ್ಯೆ ರೆಹಮತ್ ಎನ್ ಶೇಖ್, ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಅಬ್ದುಲ್ ಆರಿಸ್, ಶಾಲಾ ಮುಖ್ಯೋಪಾಧ್ಯಾಯ ಸುಧಾ ಕರ ಪೂಜಾರಿ, ಕ್ರೀಡಾ ಭಾರತಿ ಕಾರ್ಕಳ ತಾಲೂಕು ಅಧ್ಯಕ್ಷ ಶಿವಾನಂದ ಕಾಮತ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬೈಲೂರು ಮಂಜುನಾಥ ಶೆಟ್ಟಿ, ನರೇಂದ್ರ ಕಾಮತ್ ಹಾಗೂ ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ರಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ ತಂಡಗಳಲ್ಲಿ ಭಾಗವಹಿಸಿದರು.

ಕಾರ್ಕಳ ತಾಲೂಕು ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿ ದರು. ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಾಂಡುರಂಗ ಆಚಾರ್ಯ ಇವರು ವಂದಿಸಿದರು. ಕ್ರೀಡಾ ಭಾರತಿಯ ಕಾರ್ಕಳ ತಾಲೂಕು ಕಾರ್ಯದರ್ಶಿ ಸಂಜಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News