×
Ad

ಮಂಗಳೂರು: ವಿವೇಕಾನಂದ ಜಯಂತಿ ಆಚರಣೆ

Update: 2024-01-12 21:42 IST

ಮಂಗಳೂರು: ಸ್ವಾಮಿ ವಿವೇಕಾನಂದ ನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸ್ವಾಮೀ ವಿವೇಕಾನಂದರು ಇಡೀ ಪ್ರಪಂಚದಲ್ಲಿ ಬದುಕಲು ಕಲಿಸಲು ಕಲಿಸಿಕೊಟ್ಟ ಮಹಾನ್ ವ್ಯಕ್ತಿ. ನಾವು ಗುರಿಯನ್ನು ಇಟ್ಟು ಕೊಂಡು ಕೆಲಸ ಮಾಡಿದರೆ, ನಿರಂತರ ಪ್ರಯತ್ನ ಮಾಡಿದರೆ ಅದಕ್ಕೆ ನಮ್ಮ ಗುರುಗಳ ಆಶೀರ್ವಾದ ಖಂಡಿತ ಇರುತ್ತದೆ ಎಂದು ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.

ಅವರು ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಮಂಗಳೂರು ಮಹಾನಗರ ಪಾಲಿಕೆ, ಕೌಶಲ್ಯ ಅಭಿವೃದ್ಧಿ ಇಲಾಖೆ, ಎನ್ ಸಿ. ಸಿ ಆಲುಮಿ ಅಸೋಸಿಯೇಶನ್ ಮಂಗಳೂರು, ರಾಷ್ಟ್ರೀಯ ಸೇವಾಯೋಜನೆ ಸಹ ಭಾಗಿತ್ವದಲ್ಲಿ ಯುವನಿಕಾ ಫೌಂಡೇಶನ್‌ ನೇತ್ರತ್ವದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ಆಯೋಜಿಸಿದ ರಾಷ್ಟ್ರೀಯ ಯುವ ದಿನಚರಣೆ ಸಮಾ ರಂಭದ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣವನ್ನು ರಘುವೀರ್ ಸೂಟರ್ ಪೇಟೆಯವರು ನಡೆಸಿ ಯುವಜನ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸುವ ಮೂಲಕ ದೇಶದ ಅಭಿವೃದ್ಧಿಯ ಪಥದಲ್ಲಿ ಸಾಗಲು ನೆರವಾಗಬೇಕೆಂದು ಹೇಳಿದರು.

ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಭರತ್ ಕುಮಾರ್, ಎಸ್ ಎನ್ಎಸ್ ಎಸ್ ಡಿಪಾರ್ಟ್ಮೆಂಟ್ ಆಫ್ ಸ್ಕೂಲ್ ಆಫ್ ಎಜುಕೇಶನ್ ಡಿವಿಷನ್ ಆಫೀಸರ್ ಸವಿತ ಏರ್ಮಾಳ್ , ಮಂಗಳೂರು ವಿಶ್ವ ವಿದ್ಯಾವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ,ಡಾ. ನಾಗರತ್ನ ಕೆ.ಎ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಯುವನಿಕಾ ಫೌಂಡೇಶನಿನ ಸದಸ್ಯೆ ಕುಮಾರಿ ಅಶ್ವಿನಿ ಸ್ವಾಗತಿಸಿದರು, ಡಾ.ಮಂಜುಳಾ ಶೆಟ್ಟಿ ಕಾರ್ಯಕ್ರಮದ ನಿರೂಪಿಸಿದರು. ರಕ್ಷಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News