×
Ad

ಜಮೀಯ್ಯತುಲ್ ಫಲಾಹ್ ವತಿಯಿಂದ ಎಸ್.ಎಸ್.ಎಲ್.ಸಿ. ಫಲಿತಾಂಶ ಉನ್ನತೀಕರಣ ಕಾರ್ಯಾಗಾರ

Update: 2024-01-15 17:39 IST

ಮಂಗಳೂರು: ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಲ್ಲೆ ಇದರ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಜಿಲ್ಲಾ ಪಂಚಾಯತ್ ಇದರ ಸಹಕಾರದೊಂದಿಗೆ ಜ. 17ರಂದು ಪ್ರೇರಣಾ 2024 ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಲಿದೆ.

ಕಾರ್ಯಾಗಾರವನ್ನು ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಶಾಹುಲ್‌ ಹಮೀದ್ ಕೆ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್, ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ದಯಾನಂದ ರಾಮಚಂದ್ರ ನಾಯಕ್, ಜಮೀಯ್ಯತುಲ್ ಫಲಾಹ್ ಅಮೀರ್ ಮೊಹಮ್ಮದ್ ಮನ್ಸೂರು, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹಾ, ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಈಶ್ವರ್, ಜಮೀಯ್ಯತುಲ್ ಫಲಾಹ್ ಮಂಗಳೂರು ನಗರ ಘಟಕದ ಅಧ್ಯಕ್ಷ ಹಾಜಿ ಬಿ.ಎಸ್. ಮೊಹಮ್ಮದ್ ಬಶೀರ್, ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಹಾಜಿ ಮುಹಮ್ಮದ್ ಬಪ್ಪಳಿಗೆ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ತರಬೇತು ದಾರರಾದ ರಾಜೇಂದ್ರ ಭಟ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರಾದ ಯಾಕೂಬ್ ನಡ, ಖ್ಯಾತ ತರಬೇತುದಾರರು, ಅಂತರಾಷ್ಟ್ರೀಯ ಜಾದೂಗಾರರಾದ ಕುದ್ರೋಳಿ ಗಣೇಶ್ ಕಾರ್ಯಾಗಾರ ನಡೆಸಿ ಕೊಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಮತ್ತು ದಕ್ಷಿಣ ವಲಯದ ಎಸ್.ಎಸ್.ಎಲ್.ಸಿ.ಯ ಪರೀಕ್ಷೆಗೆ ಹಾಜರಾಗುವ ಸುಮಾರು 900 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯ ಪತ್ರಿಕಾ ಕಾರ್ಯದರ್ಶಿ ಮನ್ಸೂರು ಇಬ್ರಾಹಿಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News