ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಗಾಯಾಳು ಪುರುಷೋತ್ತಮಗೆ ಪರಿಹಾರ ಧನ ವಿತರಣೆ
Update: 2024-01-16 19:14 IST
ಮಂಗಳೂರು, ಜ.16: ನಗರದಲ್ಲಿ ವರ್ಷದ ಹಿಂದೆ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಪುರುಷೋತ್ತಮರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ 2 ಲಕ್ಷ ರೂ. ಮೊತ್ತದ ಚೆಕ್ ಅನ್ನು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ವಿತರಿಸಿದರು.
ಈ ಸಂದರ್ಭ ಮಾಜಿ ಶಾಸಕ ಐವನ್ ಡಿಸೋಜ, ಮನಪಾ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಲೀಂ, ಉಪಾಧ್ಯಕ್ಷ ಸದಾಶಿವ ಅಮೀನ್, ಮಾಜಿ ಕಾರ್ಪೊರೇಟರ್ ಭಾಸ್ಕರ್ ರಾವ್, ಸತೀಶ್ ಪೆಂಗಲ್, ಹಬೀಬುಲ್ಲ, ವಸಂತ್ ಶೆಟ್ಟಿ, ಆಲಿಸ್ಟನ್, ಮಹೇಶ್ ಕೋಡಿಕಲ್, ಮೀನಾ ಟೆಲ್ಲಿಸ್ ಮತ್ತಿತರರು ಉಪಸ್ಥಿತರಿದ್ದರು.