ಸಿಎಂ ಸಿದ್ದರಾಮಯ್ಯರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದನೆ ವಿರುದ್ಧ ಎನ್‌ಎಸ್‌ಯುಐ ದೂರು
Update: 2024-01-16 20:57 IST
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿರುವ ಎನ್‌ಎಸ್‌ಯುಐ ದ.ಕ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಉಪಾಯುಕ್ತರಿಗೆ ದೂರನ್ನು ಸಲ್ಲಿಸಲಾಯಿತು.
ದೂರಿಗೆ ಸ್ಪಂದಿಸಿದ ಪೊಲೀಸ್ ಉಪಾಯುಕ್ತರು, ಪ್ರಕರಣವನ್ನು ಸುರತ್ಕಲ್ ಠಾಣೆಗೆ ವರ್ಗಾಯಿಸಿ ಆರೋಪಿಯನ್ನು ಬಂಧಿ ಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.