ಅಗ್ನಿವೀರ್ ವಾಯುಪಡೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ
Update: 2024-01-18 18:59 IST
ಮಂಗಳೂರು,ಜ.18: ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗೆ ಆನ್‌ಲೈನ್ ಮೂಲಕ ಫೆಬ್ರವರಿ 6 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಾಣಿಜ್ಯ, ಕಲಾವಿಭಾಗದಲ್ಲಿ ಅಥವಾ ಡಿಪ್ಲೋಮೋ ಕೋರ್ಸ್‌ಗಳಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಮತ್ತು ಇಂಗ್ಲಿಷ್ ವಿಷಯದಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. 2004ರ ಜನವರಿ 2ರಿಂದ 2007ರ ಜುಲೈ 2ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ: 0824-2457139 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.