ಕೆ.ಜಿ.ಟಿ.ಟಿ.ಐ ಕಾರ್ಕಳ; ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರ್ಕಳ : ಮುಖ್ಯ ಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.) ಕಾರ್ಕಳ ಈ ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್,, ಟ್ಯಾಲಿ ಪ್ರೈಮ್/ಅಕೌಂಟ್ಸ್ ಎಕ್ಸಿಕ್ಯೂಟಿವ್, ಮಾಸ್ಟರ್ CAM, ಸಿ.ಎನ್.ಸಿ ಪ್ರೋಗ್ರಾಮಿಂಗ್ ಎಂಡ್ ಒಪರೇಶನ್-ಮಿಲ್ಲಿಂಗ್, ಸಿ.ಎನ್.ಸಿ ಪ್ರೋಗ್ರಾಮಿಂಗ್ ಎಂಡ್ ಒಪರೇಶನ್- ಟರ್ನಿಂಗ್, ಸಿ.ಎನ್.ಸಿ ಪ್ರೋಗ್ರಾಮಿಂಗ್ ಎಂಡ್ ಒಪರೇಶನ್-ಮೆಷಿನಿಷ್, Auto CAD & CATIA, ಮತ್ತು CCNA ಕೋರ್ಸುಗಳಲ್ಲಿ 2 ರಿಂದ 3 ತಿಂಗಳ ಅವಧಿಯ (ದಿನಕ್ಕೆ ಕನಿಷ್ಟ 2 ರಿಂದ 3 ಗಂಟೆ) ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳು ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಕಳದ ಕಾಬೆಟ್ಟುನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿರುವ ಕೆ.ಜಿ.ಟಿ.ಟಿ.ಐ. ಸಂಸ್ಥೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. (ದೂರವಾಣಿ ಸಂಖ್ಯೆ: 08258-200451, 8277741731) ಎಂದು ಕಾರ್ಕಳ ಕೆ ಜಿ ಟಿ ಟಿ ಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.