ಪಣಂಬೂರು: ಅಮಲು ಪಾದಾರ್ಥ ಸೇವಿಸಿ ಆರೋಪ; ಇಬ್ಬರ ಬಂಧನ
Update: 2024-01-19 21:50 IST
ಪಣಂಬೂರು: ಜೋಕಟ್ಟೆ ಕ್ರಾಸ್ ಬಳಿ ಅಮಲು ಪಾದಾರ್ಥ ಸೇವಿಸಿ ತೂರಾಡುತ್ತಿದ್ದ ಇಬ್ಬರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಗುರುದೀಪ್ ಸಿಂಗ್ (23) ಮತ್ತು ರಾಹುಲ್ (24) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಜೋಕಟ್ಟೆ ಕ್ರಾಸ್ ಬಳಿ ಅಮಲು ಪದಾರ್ಥ ಸೇವಿಸಿ ಅಮಲಿನಂತೆ ಇದ್ದುದನ್ನು ಕಂಡ ಸಾರ್ವಜನಿಕರೊಬ್ಬರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ನಗರದ ಎ.ಜೆ. ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾಧಕ ವಸ್ತು ಸೇರಿಸಿರುವುದು ದೃಢ ಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂದಿಸಿ ಎನ್.ಡಿ.ಪಿ.ಎಸ್. ಕಾಯ್ದೆ- 1985 ಪ್ರಕಾರ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.