ದಿ ಸೌತ್ ಕೆನರಾ ಗವರ್ನ್‌ಮೆಂಟ್ ಆಫೀಸರ್ಸ್ ಬ್ಯಾಂಕ್‌ಗೆ ಆಯ್ಕೆ
Update: 2024-01-24 23:13 IST
ಮಂಗಳೂರು: ದಿ ಸೌತ್ ಕೆನರಾ ಗವರ್ನ್‌ಮೆಂಟ್ ಆಫೀಸರ್ಸ್ ಕೋ ಆಪರೇಟಿವ್ ಬ್ಯಾಂಕ್ ಲಿ. ಡೊಂಗರಕೇರಿ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ ಅವರ ತಂಡ ಅತ್ಯಂತ ಹೆಚ್ಚಿನ ಸ್ಥಾನಗಳಿಸಿದೆ.
ಜನವರಿ 17ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಯು.ಕೆ ಅಂಬರೀಶ ಅಧ್ಯಕ್ಷರಾಗಿ ಹಾಗೂ ಮಾಲತೇಶ ಹೆಗಪ್ಪ ಲಾಠಿ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.