ಕಣಚೂರು ಅಕಾಡಮಿ ಆಫ್ ಜನರಲ್ ಎಜುಕೇಶನ್ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ
ಮಂಗಳೂರು, ಜ.26: ಕಣಚೂರು ಅಕಾಡಮಿ ಆಫ್ ಜನರಲ್ ಎಜುಕೇಶನ್ ಸಂಸ್ಥೆಯ ವತಿಯಿಂದ ನಡೆದ ಗಣರಾ ಜ್ಯೋತ್ಸವದ ಧ್ವಜಾರೋಹಣವನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನು ನೆರವೇರಿಸಿ ಸಂದೇಶ ನೀಡಿದರು.
ಕಣಚೂರು ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿನಿ ಫಾತಿಮಾ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು ಪ್ರಜಾಪ್ರಭುತ್ವದ ಅಸ್ಥಿತ್ವದ ಕುರಿತು ಮಾತನಾಡಿದರು. ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಅಲೈಯ್ಡ್ ಹೆಲ್ತ್ ಸೈನ್ಸ್‌ನ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿದರು.
ವೇದಿಕೆಯಲ್ಲಿ ಕಣಚೂರು ಅಕಾಡಮಿ ಆಫ್ ಜನರಲ್ ಎಜುಕೇಶನ್ ಸಂಸ್ಥೆಯ ಸಂಚಾಲಕ ಹಾಗೂ ಕಣಚೂರು ಇನ್‌ಸ್ಟಿ ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ನಿರ್ದೇಶಕ ಅಬ್ದುಲ್ ರಹಿಮಾನ್, ಡೀನ್ ರತ್ನಾಕರ ಯು.ಪಿ, ಕಣಚೂರು ಅಲೈಯ್ಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲೆ ಡಾ. ಶಮೀಮಾ, ಫಾರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಷಹನವಾಝ್, ಕಣಚೂರು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ರೋಹನ್ ಮೋನಿಸ್ ಹಾಗೂ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಸೈನ್ಸ್‌ನ ಪ್ರಾಂಶುಪಾಲ ಪ್ರೊ. ಇಕ್ಬಾಲ್ ಅಹ್ಮದ್ ಯು.ಟಿ, ಕಣಚೂರು ಪ್ರೀ ಸ್ಕೂಲ್‌ನ ಪ್ರಾಂಶುಪಾಲೆ ಲಿನೆಟ್ ಡಿಸೋಜ ಉಪಸ್ಥಿತರಿದ್ದರು.
ಕಣಚೂರು ಮಹಿಳಾ ಪಪೂ ಕಾಲೇಜಿನ ಪ್ರಾಂಶುಪಾಲೆ ಶಾಹಿದಾ ಕಲ್ಲಾಜೆ ಸ್ವಾಗತಿಸಿದರು. ಕಣಚೂರ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಕ್ಯಾರೆನ್ ಟ್ರೆಸ್ಸಿಲ್ಲಾ ಡಿಸೋಜ ವಂದಿಸಿದರು. ಕಣಚೂರು ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಸೌಮ್ಯಾ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.