ಬಜಾಲ್ ನಂತೂರು : ಬದ್ರಿಯಾ ಶಾಲೆ ಮತ್ತು ಹಯಾತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ
Update: 2024-01-26 22:37 IST
ಮಂಗಳೂರು, ಜ.26: ಬಜಾಲ್ ನಂತೂರು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಹಯಾತುಲ್ ಇಸ್ಲಾಂ ಮದ್ರಸ ಹೈಯರ್ ಸೆಕೆಂಡರಿ ಮದ್ರಸದ ಜಂಟಿ ಆಶ್ರಯದಲ್ಲಿ ನಡೆದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ, ಕಾರ್ಪೊರೇಟರ್ ಅಬ್ದುಲ್ ರವೂಫ್ ನೆರವೇರಿಸಿದರು. ಬದ್ರಿಯಾ ಜುಮಾ ಮಸ್ಜಿದ್‌ನ ಖತೀಬ್ ಅಬ್ದುಲ್ ನಾಸಿರ್ ಸಅದಿ ದುಆಗೈದರು.
ಶಾಲೆಯ ಮುಖ್ಯ ಶಿಕ್ಷಕ ಶರತ್ ಕುಮಾರ್ ಸ್ವಾಗತಿಸಿದರು. ಸದರ್ ಮುಅಲ್ಲಿಂ ಅಬೂಬಕ್ಕರ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್, ಸಂಚಾಲಕ ಫಕ್ರುದ್ದೀನ್, ಸದಸ್ಯರಾದ ಇಕ್ಬಾಲ್ ಅಹ್ಸನಿ ಉಪಸ್ಥಿತರಿದ್ದರು.