ದ.ಕ.ಜಿಲ್ಲಾ ವಕ್ಫ್ ಕಚೇರಿಯಲ್ಲಿ ಗಣರಾಜ್ಯೋತ್ಸವ
Update: 2024-01-26 22:39 IST
ಮಂಗಳೂರು, ಜ.26: ದ.ಕ.ಜಿಲ್ಲಾ ವಕ್ಫ್ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ನೆರವೇರಿಸಿದರು.
ಈ ಸಂದರ್ಭ ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಯಶೋಧರ ಮತ್ತಿತರರು ಉಪಸ್ಥಿತರಿದ್ದರು.