×
Ad

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಪೂರಕ: ಅಶ್ವಿನ್ ನಾಯ್ಕ್

Update: 2024-01-28 18:12 IST

ಮಂಗಳೂರು,ಜ.28: ಯಾವುದೇ ಕ್ರೀಡೆಯಾಗಲಿ, ಅದು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪೂರಕವಾಗಲಿದೆ ಎಂದು ಅಂತಾರಾಷ್ಟ್ರೀಯ ಮೋಟಾರ್ ರ್ಯಾಲಿ ಚಾಂಪಿಯನ್ ಅಶ್ವಿನ್ ನಾಯ್ಕ್ ತಿಳಿಸಿದ್ದಾರೆ.

ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ರವಿವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪತ್ರಕರ್ತರ ಒತ್ತಡದ ಕಾರ್ಯನಿರ್ವಹಣೆಯ ಮಧ್ಯೆ ವಾರ್ಷಿಕ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ. ಈ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದಕ್ಕೆ ಸಂತಸವಾಗಿದೆ ಎಂದು ಅಶ್ವಿನ್ ನಾಯ್ಕ್ ಹೇಳಿದರು.

ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು. ದ.ಕ. ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಹಿರಿಯ ಕ್ರೀಡಾಪಟು ಕಸ್ತೂರಿ ಬಾಲಕೃಷ್ಣ ಪೈ, ದತ್ತಾತ್ರೇಯ, ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ರಾಜೇಶ್ ಪೂಜಾರಿ, ಕಾರ್ಯಕ್ರಮ ಸಂಯೋಜಕ ವಿಲ್ಫೆಡ್ ಡಿಸೋಜ,ದಯಾ ಕುಕ್ಕಾಜೆ ಉಪಸ್ಥಿತರಿದ್ದರು.

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News