ಕೋಳಿ ಅಂಕಕ್ಕೆ ಅನುಮತಿ ಇಲ್ಲ: ದ.ಕ.ಜಿಲ್ಲಾ ಎಸ್ಪಿ
Update: 2024-01-30 18:51 IST
File Photo
ಮಂಗಳೂರು: ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದೆ. ಹಾಗಾಗಿ ಕೋಳಿ ಅಂಕ ನಡೆಸಲು ಅನುಮತಿ ನೀಡಲು ಪೊಲೀಸ್ ಇಲಾಖೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ.ಜಿಲ್ಲಾ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿ ನೀಡುವಂತೆ ಪೊಲೀಸ್ ಠಾಣೆಗಳಿಗೆ ತೆರಳಿ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.