×
Ad

ಬೈಕ್ ರ್ಯಾಲಿ ಮೂಲಕ ಸಂವಿಧಾನ ಜಾಗೃತಿ ಕಾರ್ಯಕ್ರಮ

Update: 2024-02-03 19:44 IST

ಮಂಗಳೂರು: ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಶನಿವಾರ ಕಿನ್ನಿಗೋಳಿ ಪಟ್ಟಣ ಪಂಚಾಯತ್, ಕಲ್ಲಮುಂಡ್ಕೂರು, ತೆಂಕಮಿಜಾರ್ ಮತ್ತು ಪುತ್ತಿಗೆ ಗ್ರಾಪಂನಲ್ಲಿ ಸಂಚರಿಸಿತು.

ಕಲ್ಲಮುಂಡ್ಕೂರು ಗ್ರಾಪಂ ವ್ಯಾಪ್ತಿಯ ಕುದ್ರಿಪದವು ಎಂಬಲ್ಲಿ ಸಂವಿಧಾನ ಜಾಗೃತಿಯ ಬೈಕ್ ರ್ಯಾಲಿಯನ್ನು ತಾಪಂ ಇಒ ಲೋಕೇಶ್ ಸಿ. ಅವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಕಾವಳಪಡೂರು, ಬಡಗ ಕಜೆಕಾರು, ಪಿಲಾತಬೆಟ್ಟು, ಚೆನ್ನೈತೋಡಿ, ಉಳಿ ಗ್ರಾಪಂಗಳಿಗೆ ಆಗಮಿಸಿದ ಜಾಥಾವು ಸಂವಿಧಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿತು. ಸ್ಥಳೀಯ ಗ್ರಾಪಂ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಒಳಗೊಂಡ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ಒಳಗೊಂಡ ಬೀದಿ ನಾಟಕ ವನ್ನು ಪ್ರದರ್ಶಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News