ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು, ಫೆ.5:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ , ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೊಲ್ಲಮೊಗ್ರುವಿನ ಬಂಗ್ಲೆಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಸೋಮವಾರ ನಡೆದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿ ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶುಭ ಹಾರೈಸಿ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಗ್ರಾಮದ ಜನರ ಸಮಸ್ಯೆ ಬಗ್ಗೆ ಅರಿತು ಕೊಳ್ಳಲು ಗ್ರಾಮಕ್ಕೆ ತೆರಳಲು ಚಿಂತನೆ ಮಾಡಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ,ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ,ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಂಚಾಯತ್ ಕಾರ್ಯದರ್ಶಿ ಡಾ.ರಘು ಮೊದಲಾದವರು ಉಪಸ್ಥಿತರಿದ್ದರು.