×
Ad

ಪುತ್ತೂರು: ಮಹಿಳೆ ಆತ್ಮಹತ್ಯೆ

Update: 2024-02-07 18:54 IST

ಪುತ್ತೂರು: ಕಬಕ ಗ್ರಾಮದ ನೆಹರುನಗರ ರಕ್ತಶ್ವರಿ ವಠಾರದ ಶಿವನಗರ ಎಂಬಲ್ಲಿನ ನಿವಾಸಿ ವಿವಾಹಿತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೂಲತ: ಶಿವಮೊಗ್ಗ ನಿವಾಸಿಗಳಾಗಿದ್ದು ಪ್ರಸ್ತುತ ರಕ್ತಶ್ವರಿ ವಠಾರ ಶಿವನಗರದಲ್ಲಿ ವಾಸವಾಗಿದ್ದ  ಶ್ರೀಧರ್ ಸಿಂಗ್ ಎಂಬವರ ಪತ್ನಿ ಅಶ್ವಿನಿ(42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಅವರು ಮಂಗಳವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ತಡ ರಾತ್ರಿ ಮೃತಪಟ್ಟಿದ್ದಾರೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News