×
Ad

ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಮಾಲೋಚನೆ

Update: 2024-02-09 20:41 IST

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್‌ನ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ಬಾವ, ಮಿಥುನ್ ರೈ, ಇನಾಯತ್ ಅಲಿ, ಮಮತಾ ಗಟ್ಟಿ, ಕೃಪಾ ಆಳ್ವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್, ಮುಖಂಡರಾದ ಕಣಚೂರು ಮೋನು, ಭರತ್ ಮುಂಡೋಡಿ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡು ವಂತಹ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರವಿದೆ. ಅದನ್ನು ಅಧಿಕಾರದಿಂದ ದೂರ ಸರಿಸಲು ದೇಶಾದ್ಯಂತ ಕಾಂಗ್ರೆಸ್ ಜನಾಂದೋಲನ ರೂಪಿಸಿದೆ. ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲೂ ಬಿಜೆಪಿಯ ವಿರುದ್ಧ ಸಂಘಟನಾ ತ್ಮಕ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಸರಕಾರಿ ಯೋಜನೆಗಳ ಸಹಿತ ಇತರ ಅಭಿವೃದ್ಧಿಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡುವಂತಹ ಜವಾಬ್ದಾರಿಯನ್ನು ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ನಾಯಕರಿಗೆ ನೀಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News