×
Ad

ಮಂಗಳೂರು: ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭೆ

Update: 2024-02-09 21:54 IST

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿರುವ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು.

ಸರಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಸಚಿವರು ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು ಕ್ರಿಯಾತ್ಮಕವಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಸಿಇಒ ಡಾ. ಆನಂದ್, ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್, ಶಾಸಕ ಹರೀಶ್ ಕುಮಾರ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News