ಮಂಗಳೂರು: ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರ
ಮಂಗಳೂರು: ದ.ಕ.ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ‘ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವನ್ನು ಓದಿಸಿ’ ಯೋಜನೆಯಡಿ ತಾಲೂಕು ಹಾಗೂ ಕ್ಷೇತ್ರಮಟ್ಟದ ಸಿಬ್ಬಂದಿ-ಅಧಿಕಾರಿಗಳಿಗೆ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧಕಾಯ್ದೆ, ಪೊಕ್ಸೊ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆ, ಮಕ್ಕಳ ಮಾರಾಟ ಸಾಗಾಟ ತಡೆ ಕಾಯ್ದೆ ಬಗ್ಗೆ ಮಂಗಳೂರು ತಾಪಂ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಿತು.
ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಹೆಣ್ಣು ಮಗುವಿನ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಲಿಂಗ ಪತ್ತೆಯು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಮಂಗಳೂರು ತಾಪಂ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ಅಧ್ಯಕ್ಷತೆ ವಹಿಸಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ.ಕಾರಿಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ.ಚಿರಾಗ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ ಕೆ., ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಡಾ.ಅಮೃತ ಭಂಡಾರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲೆ ಗೌರಿ ಮತ್ತಿತರರು ಭಾಗವಹಿಸಿದ್ದರು.