×
Ad

ಉಪ್ಪಿನಂಗಡಿ: ನಿರಂಜನ್ ಬಾವಂತಬೆಟ್ಟು ನಿಧನ

Update: 2024-02-12 20:43 IST

ಉಪ್ಪಿನಂಗಡಿ: ಸಹಕಾರ ರತ್ನ ಕರಾಯ ಗ್ರಾಮದ ಬಿ. ನಿರಂಜನ್ ಬಾವಂತಬೆಟ್ಟು (75) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫೆ.12ರಂದು ನಿಧನರಾದರು.

ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹ ಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಸುದೀರ್ಘ 41 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರಲ್ಲದೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ, ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕರಾಯ ಗ್ರಾಮ ಮರಿಪಾದೆ ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಸಮಿತಿಯ ಮೊಕ್ತೇಸರರು, ಭಜನಾ ಮಂಡಳಿಯ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಸಹಕಾರ ಕ್ಷೇತ್ರ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಇವರು ಗ್ರಾಮದ ಹಿರಿಯರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News