×
Ad

ನಿಟ್ಟೆ ಜಪಾನೀಸ್ ಟೆಕ್ನೋ-ಕಲ್ಚರಲ್ ಸೆಂಟರ್ ಡೇ ಆಚರಣೆ

Update: 2024-02-13 21:01 IST

ನಿಟ್ಟೆ: ನಿಟ್ಟೆ ಜಪಾನೀಸ್ ಟೆಕ್ನೋ-ಕಲ್ಚರಲ್ ಸೆಂಟರ್ ದಿನವನ್ನು ಇತ್ತೀಚೆಗೆ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವು ವಿದ್ವಾಂಸರು ಮತ್ತು ವಿದ್ಯಾರ್ಥಿಗಳ ಸಮ್ಮಿಲನಕ್ಕೆ ಸಾಕ್ಷಿಯಾಯಿತು, ಇದು ಭಾರತ ಮತ್ತು ಜಪಾನ್ ನಡುವಿನ ಸಾಂಸ್ಕೃತಿಕ ವಿನಿಮಯದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿ ಸಿದ್ದ ಬೆಂಗಳೂರಿನ ಜಪಾನ್ ಕಾನ್ಸುಲ್ ಕಚೇರಿಯ ಕಾನ್ಸುಲ್ ಮತ್ತು ಸಾಂಸ್ಕೃತಿಕ ಸಂಯೋಜಕ ಯಸುಟೊಮೊ ಕವಾಯಿ ಉಪಸ್ಥಿತರಿದ್ದರು.

ಬೆಂಗಳೂರಿನ ಜಪಾನ್ ಕಾನ್ಸುಲೇಟ್ ಜನರಲ್‌ನ ಸಲಹೆಗಾರರಾದ ಕುಟಿನ್ಹಾ ಡಾಲ್ವಿನ್ ಅವರು ಗೌರವ ಅತಿಥಿಯಾಗಿ ದ್ದರು. ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಅಂತರ್‌ರಾಷ್ಟ್ರೀಯ ಸಹಯೋಗ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ತಮ್ಮ ಆಳವಾದ ಬದ್ಧತೆಯನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಜಪಾನ್‌ನ ಕೊಬಯಾಶಿ, ಜಪಾನ್ ನಿಡೆಕ್ ಅಡ್ವಾನ್ಸ್‌ಡ್ ಟೆಕ್ನಾಲಜಿ ಕಾರ್ಪೊರೇಷನ್ ನ ಪ್ರತಿನಿಧಿಗಳು ಮತ್ತು ರಿಟ್ಸುಮೇಕನ್ ವಿಶ್ವವಿದ್ಯಾನಿಲಯದ ಬೋಧಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಟ್ಟೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಅಂತರ್‌ರಾಷ್ಟ್ರೀಯ ಸಹಯೋಗದ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್ ಸ್ವಾಗತಿಸಿ ದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕೃಷ್ಣರಾಜ ಜೋಯಿಸ ಎ ವಂದಿಸಿದರು. ವಿದ್ಯಾರ್ಥಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News