ಸಂತ ಜೆರೋಸಾ ಶಾಲಾ ವಿವಾದ: ಸಾಮಾಜಿಕ ಜಾಲತಾಣಗಳ ಸಂದೇಶಗಳ ವಿರುದ್ಧ ಸೆನ್ ಠಾಣೆಗೆ ದೂರು
Update: 2024-02-14 20:58 IST
ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ತರಗತಿಯಲ್ಲಿ ಹಿಂದೂ ಧರ್ಮ ಹಾಗೂ ದೇವರ ಬಗ್ಗೆ ಅವಹೇಳನವಾಗಿ ಪಾಠ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಗಳನ್ನು ಹರಡಿಸುತ್ತಿರುವ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಎಸ್.ಅಪ್ಪಿ ಈ ಬಗ್ಗೆ ಬುಧವಾರ ದೂರು ನೀಡಿದ್ದಾರೆ.
ಕೆಲವು ಅಪರಿಚಿತರು ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸುದ್ದಿ, ವಾಯ್ಸ್ ಮೆಸೇಜ್‌ಗಳನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಪ್ಪಿ ದೂರಿನಲ್ಲಿ ತಿಳಿಸಿದ್ದಾರೆ.