ಡಾ.ಜೆರಿ ನಿಡ್ಡೊಡಿಗೆ ಕೊಂಕಣಿ ಲೇಖಕ್ ಸಂಘ್‌ನ ಪ್ರಶಸ್ತಿ ಪ್ರದಾನ
ಮಂಗಳೂರು: ಪ್ರತಿಯೊಂದು ಸಮುದಾಯಕ್ಕೆ ತನ್ನದೇ ಆದ ಸಂಸ್ಕೃತಿ ಇರುವಂತೆ ಕೊಂಕಣಿ ಭಾಷಿಕರಿಗೂ ಪ್ರತ್ಯೇಕ ಸಂಸ್ಕೃತಿ ಇದೆ. ಇದು ತಲೆತಲಾಂತರದಿಂದ ಬಂದಿದ್ದು, ಪರಿವರ್ತನಾಶೀಲವಾಗಿದೆ.ಬದಲಾವಣೆಯು ಕೂಡ ಪ್ರಕೃತಿ ನಿಯಮವಾಗಿದೆ. ಬದಲಾವಣೆಯ ಈ ಬಿರುಗಾಳಿಯಲ್ಲಿ ಕೊಂಕಣಿ ಸಂಸ್ಕೃತಿ-ಸಂಪ್ರದಾಯದ ಉತ್ತಮ ಅಂಶಗಳನ್ನು ಉಳಿಸಿಕೊಳ್ಳುವುದು ಸಾಹಿತಿಗಳ ಜವಾಬ್ದಾರಿಯಾಗಿದೆ ಎಂದು ಮಂಗಳೂರು ಧರ್ಮಪ್ರಾಂತದ ಸೆಮಿನರಿಯ ರೆಕ್ಟಾರ್ ರೆ. ಡಾ. ರೊನಾಲ್ಡ್ ಸೆರಾವೊ ಹೇಳಿದರು.
ಕೊಂಕಣಿ ಲೇಖಕ್ ಸಂಘ್ ಕರ್ನಾಟಕವು ನಗರದ ಸಂದೇಶ ಪ್ರತಿಷ್ಠಾನದಲ್ಲಿ ಶನಿವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತಿ ಡಾ.ಜೆರಿ ನಿಡ್ಡೊಡಿ ಅವರಿಗೆ ಪ್ರಶಸ್ತಿ ಪ್ರದಾನಿಸಿ ಅವರು ಮಾತನಾಡಿದರು.
ಈ ಸಂದರ್ಭ ಪೊಯೆಟಿಕ ಕವಿ ಪಂಗಡ ಕಟ್ಟಿ ಕೊಂಕಣಿ ಕಾವ್ಯ ಕ್ಷೇತ್ರದಲ್ಲಿ ವಿಭಿನ್ನ ಛಾಪನ್ನಿತ್ತ ನವೀನ್ ಪಿರೇರಾ ಸುರತ್ಕಲ್, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ವಿಜೇತ ವಲ್ಲಿ ಕ್ವಾಡ್ರಸ್ ಅವರನ್ನು ಡೊಲ್ಪಿಕಾಸ್ಸಿಯಾ ಹಾಗೂ ಆಂಡ್ರೂ ಡಿಕುನ್ಹಾ ಅಭಿನಂದಿಸಿದರು.
ಆಳ್ವಾಸ್ ಕಾಲೇಜಿನ ಪ್ರೊಫೆಸರ್ ಟಿ.ಎ.ಎನ್ ಖಂಢಿಗೆ ಮಾತನಾಡಿದರು. ದಿಯಾ ಮಸ್ಕರೇನಸ್, ಕೆನಿಸ್ಸಾ ಡಿಸೋಜ, ಮ್ಯಾಕ್ಸಿಂ ರೊಡ್ರಿಗಸ್ ಬೊಂದೆಲ್ ಸಹಕರಿಸಿದರು. ರೆ.ಫಾ. ಮಾರ್ಕ್ ವಾಲ್ಡರ್, ಸೆವಕ್ ಸಂಪಾದಕ ರೆ.ಫಾ. ಚೇತನ್ ಕಾಪುಜಿನ್, ಲೇಖಕ ಜೆ.ಎಫ್. ಡಿಸೋಜ, ಎಂಸಿಸಿ ಬ್ಯಾಂಕ್ ನಿರ್ದೇಶಕಿ ಐರಿನ್ ಪಿಂಟೊ ಉಪಸ್ಥಿತರಿದ್ದರು.
ಕೊಂಕಣಿ ಲೇಖಕ ಸಂಘ್ ಇದರ ಸಂಚಾಲಕ ರಿಚಾರ್ಡ್ ಮೊರಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಸದಸ್ಯರಾದ ಡಾ. ಎಡ್ವರ್ಡ್ ನಜ್ರೆತ್ ಸ್ವಾಗತಿಸಿದರು. ಹೆನ್ರಿ ಮಸ್ಕರೇನಸ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಫೆಲ್ಸಿ ಲೋಬೊ ಸನ್ಮಾನಪತ್ರ ವಾಚಿಸಿದರು. ಜಾಜ್ ಲಿಗೋರಿ ಡಿಸೋಜ ವಂದಿಸಿದರು. ಸಾಹಿತಿ ಲವಿ ಗಂಜಿಮಠ ಕಾರ್ಯಕ್ರಮ ನಿರೂಪಿಸಿದರು.