×
Ad

ಬಂಟ್ವಾಳ : ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ

Update: 2024-02-19 21:31 IST

ಬಂಟ್ವಾಳ : ಧಾರ್ಮಿಕ ಕೇಂದ್ರಗಳಲ್ಲಿ ನಮ್ಮನ್ನು ನಾವು ತೊಡಗಿಸಿ ಕೊಂಡಾಗ ಸಾಮಾಜಿಕ ಬದಲಾವಣೆ ಆಗುತ್ತದೆ ಎಂದು ಕನ್ಯಾಡಿ ಶ್ರೀರಾಮ‌ ಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅಶ್ರೀರ್ವಚನ ನೀಡಿದರು.

ಅವರು ಬಿ.ಸಿ.ರೋಡಿನ ಪೊಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜ್ಞಾನಕ್ಕೆ ಯಾವುದೇ ಅಡ್ಡಿ ಆತಂಕವಿಲ್ಲ, ಜ್ಞಾನವನ್ನು ಪಡೆಯುವ ಸಲುವಾಗಿ ಶೃದ್ದಾ ಕೇಂದ್ರಗಳ ಉದಯವಾಗಬೇಕು, ಅಂತಹ ಧಾರ್ಮಿಕ ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ಅವರು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಹೇಶ್ ಭಟ್ ಮುನಿಯಂಗಳ, ವಕೀಲರಾದ ಅಶ್ವನಿ ಕುಮಾರ್ ರೈ, ಭಂಯಕೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ‌ ಅಧ್ಯಕ್ಷ ರಘು ಸೋಮಯಾಜಿ, ಧಾರ್ಮಿಕ ದತ್ತಿ ಇಲಾಖೆಯ ಸದಸ್ಯೆ ಮಲ್ಲಿಕಾ ಪಕ್ಕಳ, ನ್ಯಾಯವಾದಿ ದಯಾನಂದ, ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ರೋಟರಿ ಕ್ಲಬ್ ಬಂಟ್ವಾಳ ಟೌನ್ ಅದ್ಯಕ್ಷ ಸುರೇಶ್, ಬಂಟ್ವಾಳ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ರಕ್ತೇಶ್ವರಿ ದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿಶ್ವನಾಥ್ , ರೋಟರಿ ಕ್ಲಬ್ ಬಿಸಿರೋಡ್ ಸಿಟಿ ಅಧ್ಯಕ್ಷ ಗಣೇಶ್ ಶೆಟ್ಟಿ ಗೋಳ್ತಮಜಲು, ಉದ್ಯಮಿ ಶಿವಾಜಿ ಜಾದವ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಉಪಸ್ಥಿತರಿದ್ದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಹಾಸ್ ಬಿ.ಶೆಟ್ಟಿ ಸ್ವಾಗತಿಸಿ, ಹೆಡ್ ಕಾನ್ಸ್ ಟೇಬಲ್ ಧನ್ಯಶ್ರೀ ವಂದಿಸಿದರು. ಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News