×
Ad

ಸುರತ್ಕಲ್‌: ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು

Update: 2024-02-21 22:07 IST

ಸುರತ್ಕಲ್‌: ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ಬುಧವಾರ ವರದಿಯಾಗಿದೆ.

ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು ಬಂದಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News