×
Ad

ಮಂಗಳೂರು ಮಹಾನಗರ ಪಾಲಿಕೆ: ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ

Update: 2024-02-22 21:20 IST

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡುಗಳ ಎಲ್ಲ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳುವಂತೆ ಪ್ರಕಟನೆ ತಿಳಿಸಿದೆ.

ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆ ಫೆಬ್ರವರಿ 19 ರಿಂದ ಆರಂಭಗೊಂಡಿದ್ದು, ಆನ್‌ಲೈನ್ ತಂತ್ರಾಂಶದ ಮೂಲಕ ಹೊಸ /ನವೀಕರಣ ಉದ್ದಿಮೆ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಬಹುದು. 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿ ಯಾದ ನಂತರ ಉದ್ದಿಮೆ ಪರವಾನಿಗೆ ತಂತ್ರಾಂಶದಲ್ಲಿ ಉದ್ಯಮಿದಾರರಿಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.

ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ಶುಲ್ಕವನ್ನು ಎಪ್ರಿಲ್ 30ರೊಳಗೆ ದಂಡ ರಹಿತವಾಗಿ ನವೀಕರಿಸಬಹುದಾಗಿದೆ. ತದನಂತರ ಪ್ರತಿ ಮೂರು ತಿಂಗಳಿಗೊಮ್ಮೆ ಶೇ. 25ರಷ್ಟು ಹೆಚ್ಚುವರಿ ದಂಡ ವಿಧಿಸಲಾಗುತ್ತದೆ

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 6364016558 ಅಥವಾ ವೆಬ್‌ಸೈಟ್ ವಿಳಾಸ: mcctradelicense.com ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News