×
Ad

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Update: 2024-02-23 21:00 IST

ಮಂಗಳೂರು: ಮೂಡುಶೆಡ್ಡೆ ರೈಲ್ವೆ ಟ್ರ್ಯಾಕ್‌ನ ಅಂಡರ್ ಪಾಸ್ ಬಳಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿ ಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂಡುಶೆಡ್ಡೆಯ ರಿಝ್ವಾನ್(34) ಎಂಬಾತನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಆರೋಪಿಯಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, 15 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಆಟೊ ರಿಕ್ಷಾ, 1,280 ರೂ. ನಗದು ಸಹಿತ ಒಟ್ಟು 91,280 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಹಾಗೂ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಮತ್ತಿತರ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್‌ರ ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News