ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2024-02-23 21:04 IST
ಮಂಗಳೂರು: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಮಾದಾಪುರದ ಈರಪ್ಪ ಎಂಬಾತನನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ ಕದ್ರಿ ಠಾಣೆಯ ಎಸ್ಸೈ ಉಮೇಶ್ ಕುಮಾರ್ ನೇತೃತ್ವದ ತಂಡವು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದೆ.