×
Ad

ಶಾಸಕ ರಾಜಾ ವೆಂಕಟಪ್ಪ ನಿಧನಕ್ಕೆ ಸ್ಪೀಕರ್ ಯುಟಿ ಖಾದರ್ ಸಂತಾಪ

Update: 2024-02-25 21:00 IST

ಶಾಸಕ ರಾಜಾ ವೆಂಕಟಪ್ಪ

ಮಂಗಳೂರು: ಸುರಪುರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿರುವ ರಾಜಾ ವೆಂಕಟಪ್ಪ ನಾಯ್ಕ ನಿಧನಕ್ಕೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಫರೀದ್ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಾ ವೆಂಕಟಪ್ಪ ಅವರು ಸಜ್ಜನ ವ್ಯಕ್ತಿತ್ವವನ್ನು ಹೊಂದಿ ನನ್ನ ಆತ್ಮೀಯರಾಗಿದ್ದು ಅವರ ಅಕಾಲಿಕ ನಿಧನದಿಂದ ಅತೀವ ದುಃಖವಾಗಿದೆ ಎಂದು ಖಾದರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ರಾಜಾ ವೆಂಕಟಪ್ಪ ನಾಯ್ಕ ಅವರು ನಾಲ್ಕು ಬಾರಿ ವಿಧಾನ ಸಭಾ ಶಾಸಕರಾಗಿದ್ದು ಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಅಪಾರ ಕೊಡುಗೆಯನ್ನು ನೀಡಿ ಜನರ ವಿಶ್ವಾಸವನ್ನು ಗಳಿಸಿ ಜನಾನುರಾಗಿಯಾಗಿದ್ದರು.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಸರ್ವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಯು.ಟಿ. ಖಾದರ್  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News