×
Ad

ಎಸ್ಸಿ, ಎಸ್‌ಟಿ ಮೀಸಲು ಅನುದಾನ ಗ್ಯಾರಂಟಿಗೆ ಬಳಕೆ ಆರೋಪ: ಬಿಜೆಪಿ ಪ್ರತಿಭಟನೆ

Update: 2024-02-26 17:32 IST

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆ ಗಳಿಗೆ ಬಳಸಿಕೊಂಡು ರಾಜ್ಯ ಸರಕಾರ ಪ.ಜಾತಿ ಮತ್ತು ಪ.ಪಂಗಡದ ಜನರಿಗೆ ಘೋರ ಅನ್ಯಾಯ ಮತ್ತು ಮೋಸ ಮಾಡುತ್ತಿದೆ ಎಂದು ಆರೋಪಿಸಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಸೋಮವಾರ ಬಿಜೆಪಿ ಎಸ್ಸಿ ಮತ್ತು ಎಸ್‌ಟಿ ಮೋರ್ಚಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸರಕಾರದಲ್ಲಿರುವ ದಲಿತ ಸಮುದಾಯದ ಸಚಿವರು ಮೌನವಾಗಿದ್ದಾರೆ. ಅವರಿಗೆ ಸರಕಾರದ ವಿರುದ್ಧ ಧ್ವನಿ ಎತ್ತುವ ಶಕ್ತಿ ಇಲ್ಲದಾಗಿದೆ. ಸಚಿವ ಪ್ರಿಯಾಂಕ ಖರ್ಗೆಗೆ ಸರಕಾರವನ್ನು ಪ್ರಶ್ನಿಸುವ ಧೈರ್ಯ ಇಲ್ಲ. ಸಮಾಜ ಕಲ್ಯಾಣ ಸಚಿವ ಡಾ. ಎಚ್‌ಸಿ ಮಹದೇವಪ್ಪ ಎಲ್ಲಿ ಹೋಗಿದ್ದಾರೆ ಗೊತ್ತಿಲ್ಲ. ಅವರನ್ನು ಕತ್ತಲೆಯಲ್ಲಿಡಲಾಗಿದೆ ಎಂದು ಆರೋಪಿಸಿದರು.

ಗ್ಯಾರಂಟಿಯನ್ನು ಸಮಪರ್ಕವಾಗಿ ಜಾರಿಗೊಳಿಸುವಲ್ಲಿ ಎಡವಿರುವ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಗ್ಯಾರಂಟಿ ಇಲ್ಲದಾಗಿದೆ ಎಂದು ಸತೀಶ್ ಕುಂಪಲ ಹೇಳಿದರು.

ಪರಿಶಿಷ್ಠ ಜಾತಿ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ವಿನಯ ನೇತ್ರ ದಡ್ಡಲಕಾಡು ಮಾತನಾಡಿದರು. ಮನಪಾ ಉಪಮೇಯರ್ ಸುನಿತಾ, ಪರಿಶಿಷ್ಠ ಜಾತಿ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಬೆಳುವಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಬಿಜೆಪಿ ನಿತಿನ್ ಕುಮಾರ್, ಮಹಿಳಾ ಮೋರ್ಚಾದ ಮಂಜುಳಾ ರಾವ್,ಪೂಜಾ ಪೈ, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News