×
Ad

ಸಂವಿಧಾನ ಉಳಿಸಲು ಸಮಾವೇಶ ಮಾಡುವುದು ತಪ್ಪಲ್ಲ : ಕೋಟ ಶ್ರೀನಿವಾಸ ಪೂಜಾರಿ

Update: 2024-02-27 16:39 IST

ಮಂಗಳೂರು: ಸಂವಿಧಾನ ಉಳಿಸಲು ರಾಜ್ಯ ಸರಕಾರ ಸಮಾವೇಶ ಮಾಡುವುದು ತಪ್ಪಲ್ಲ. ನಾವು ಕೂಡ ಅದನ್ನು ಗೌರವಿಸುತ್ತೇವೆ. ಆದರೆ ಸಂವಿಧಾನ ಕಾರ್ಯಕ್ರಮವನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡು ರಾಜಕೀಯ ಮಾಡುವುದು ಸಲ್ಲದು ಮತ್ತು ಅಂತಹ ಉದ್ದೇಶವಿದ್ದರೆ ಅದನ್ನು ಕೈಬಿಡಬೇಕು ಎಂದು ವಿಧಾನ ಪರಿಷತ್‌ ನ ವಿಪಕ್ಷ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದ ಬಿಜೆಪಿ‌ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜಕೀಯ ಲಾಭಕ್ಕಾಗಿ ಮತ್ತು ಕೇಂದ್ರ ಸರಕಾರ, ಪ್ರಧಾನಿ ಮೋದಿ ಅವರನ್ನು ನಿಂದಿಸುವ ಕೆಲಸಕ್ಕೆ ಜನರ ತೆರಿಗೆ ಹಣವನ್ನು ಪೋಲು ಮಾಡುವುದು ಸರಿಯಲ್ಲ ಎಂದರು. ರಾಜಕಾರಣಕ್ಕಾಗಿಯೇ ಅಂಬೇಡ್ಕರ್‌ ಹೆಸರನ್ನು ಬಳಸಿಕೊಳ್ಳುತ್ತಿ ದ್ದಾರೆ. ಸಂವಿಧಾನ ರಚನೆ ಸಮಯದಲ್ಲಿ ಕಾಂಗ್ರೆಸ್‌ ಮಾಡಿದ ಕೃತ್ಯಗಳು ಜನರಿಗೆ ಗೊತ್ತಿವೆ ಎಂದರು. ದೇಶವನ್ನು ಜೋಡಿಸುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಆದರೆ ಈಗ ರಾಹುಲ್‌ ಗಾಂಧಿ ಕೇವಲ ರಾಜಕೀಯಕ್ಕಾಗಿ ಯಾತ್ರೆ ಆರಂಭ ಮಾಡಿದ್ದಾರೆ ಎಂದು ಟೀಕಿಸಿದರು.

ದಕ್ಷಿಣ ಕನ್ನಡ ಲೋಕಸಭೆ ಚುನಾವಣೆಗೆ ಟಿಕೆಟ್‌ಗಾಗಿ ಕಾರ್ಯಕರ್ತರು ಅಪೇಕ್ಷೆ ಪಡುವುದು ತಪ್ಪಲ್ಲ. ಅರುಣ್‌ ಪುತ್ತಿಲ, ಸತ್ಯಜಿತ್‌ ಸುರತ್ಕಲ್‌, ರಾಮಚಂದರ್‌ ಬೈಕಂಪಾಡಿ ಉತ್ತಮ ಕಾರ್ಯಕರ್ತರು. ಅವರು ಟಿಕೆಟ್‌ಗಾಗಿ ಅಪೇಕ್ಷೆ ವ್ಯಕ್ತಪಡಿ ಸಿದ ಮಾತ್ರಕ್ಕೆ ಅದು ಪಕ್ಷದ ಅಶಿಸ್ತು ಎನ್ನಲು ಸಾಧ್ಯವಿಲ್ಲ. ಅಂತಿಮವಾಗಿ ಪಕ್ಷದ ವರಿಷ್ಠರು ಟಿಕೆಟ್‌ ನೀಡಿದ ಮೇಲೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಲಿದೆ. ಅಲ್ಲದೆ ಕೇಂದ್ರ ಸರಕಾರದ ಸಾಧನೆ, ಪ್ರಧಾನಿ ಮೋದಿ ಅವರ ಕಾರ್ಯಶೈಲಿ ಮತಗಳ ಅಂತರವನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ಲೋಕಸಭಾ ಕ್ಷೇತ್ರದ ಸಂಚಾಲಕ ನಿತಿನ್‌ ಕುಮಾರ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News