×
Ad

ಸಿಕ್ಕಿಂ, ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನ ಸ್ಕ್ರೀನಿಂಗ್ ಸಮಿತಿ ಸದಸ್ಯರಾಗಿ ಐವನ್ ಡಿಸೋಜ ನೇಮಕ

Update: 2024-02-28 23:40 IST

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಕ್ಲಸ್ಟರ್ 5 , ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ನ ಸ್ಕ್ರೀನಿಂಗ್ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿ ಸೋಜ ಅವರು ನೇಮಕಗೊಂಡಿದ್ದಾರೆ.

ಪಂಜಾಬ್‌ನ ಮಾಜಿ ಸ್ಪೀಕರ್ ರಾಣಾ ಕೆ.ಪಿ.ಸಿಂಗ್ ಅಧ್ಯಕ್ಷರಾಗಿರುವ ಸ್ಕ್ರೀನಿಂಗ್ ಸಮಿತಿಯಲ್ಲಿ ಐವನ್ ಡಿ ಸೋಜ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಪುತ್ರ ಹಾಗೂ ಮಾಜಿ ಸಚಿವ ಜೈವರ್ಧನ್ ಸಿಂಗ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News