×
Ad

ತಲಪಾಡಿ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತ್ಯು

Update: 2024-03-20 14:13 IST

ಬಿ.ಸಿ.ರೋಡ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಪುತ್ರಿ ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ ಅವರು‌ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶಹಿಮಾರ ಅಕಾಲಿಕ ನಿಧನಕ್ಕೆ ತೌಹೀದ್ ವಿದ್ಯಾಸಂಸ್ಥೆ, ತಲಪಾಡಿ ಜಮಾಅತ್ ತೀವ್ರ ಸಂತಾಪ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News