ರಂಗಕರ್ಮಿ ಎಸ್. ರಾಮದಾಸ್ ನಿಧನ

Update: 2024-03-28 11:37 GMT

ಮಂಗಳೂರು: ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ ಮಾ.27ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು.

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ದಶಕಗಳ ಕಾಲದ ಹಿಂದೆ ಪ್ರಾಥಮಿಕ ನವೋದಯ ಕಲಾವೃoದದಲ್ಲಿ ಮಸಣಕ್ಕೆ, ತರಂಗ ತರಂಗ ಅಂತರಂಗ, ಹೆಗಲಿಗೆ ಇರುಳು, ಅಸ್ತಮಾನ, ಕಲ್ಜಿಗದ ಕುರುಕ್ಷೇತ್ರ, ಕೋಟಿ ಚೆನ್ನಯ್ಯ ಪ್ರಮುಖ ಪಾತ್ರ ದಲ್ಲಿ ನಟಿಸಿದ್ದ ಇವರು ಎನ್. ಎಸ್. ರಾವ್ ರಚಿಸಿದ ಕಲಿ ಕಂಠೀರವ ನಾಟಕದಲ್ಲಿ ನಂಜಯ್ಯನ ಪಾತ್ರದಲ್ಲಿ ಮಿಂಚಿದ್ದರು.

ಸೀತಾರಾಮ್ ಕುಲಾಲ್ ರವರ ಮಣ್ಣಿನ ಮಗಳು ಅಬ್ಬಕ್ಕ ದಲ್ಲಿ ನಾರ್ಣಪ್ಪಯ್ಯ ಪಾತ್ರ ಸ್ಮರಿಸುವಂತದ್ದು. ಮಾಸ್ಟರ್ ವಿಠ್ಠಲ್ ಜತೆಯಲ್ಲಿ 40 ವರ್ಷ ಗಳಿಂದ ಹಾಡುಗಾರನಾಗಿ ಪ್ರಸಾಧನ ಕಲಾವಿದರಾಗಿ, ಮಾಯ ಮೃಗ ಶಕುಂತಳಾ, ಮೋಹಿನಿ ಭಸ್ಮಾಸುರ, ಇನ್ನೂ ಅನೇಕ ರೂಪಕಗಳಿಗೆ ಹಾಡುಗಾರನಾಗಿ, ಪ್ರಸಾಧನ ಕಲಾವಿದನಾಗಿ ಪ್ರಸಿದ್ಧಿ ಹೊಂದಿದ್ದರು.

ಮೃತರು ಪತ್ನಿ, ಎರಡು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಕಲ್ಕೂರ ಸಂಸ್ಥೆಯ ಪದೀಪ್ ಕಲ್ಕೂರ ಸೇರಿದಂತೆ ಜಿಲ್ಲೆಯ ಅನೇಕ ಭಜನಾ ಸಂಸ್ಥೆಗಳು, ನಾಟಕ ಸಂಸ್ಥೆಗಳು, ಭರತ ನಾಟ್ಯ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News