ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್‌ರಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಉಸ್ತುವಾರಿ
Update: 2024-03-28 20:17 IST
ಪಿ.ವಿ. ಮೋಹನ್
ಮಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗು ತೆಲಂಗಾಣ ರಾಜ್ಯದ ಚುನಾವಣೆಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿರುವ ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಪಿ.ವಿ. ಮೋಹನ್ ಅವರನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪ್ರಸಕ್ತ ಪಿ.ವಿ.ಮೋಹನ್ ಕೆಪಿಸಿಸಿ ಬಿಎಲ್‌ಎ ಸಂಯೋಜನಾ ಮತ್ತು ತರಬೇತಿ ಸಮಿತಿಯ ರಾಜ್ಯ ಅಧ್ಯಕ್ಷರಾಗಿದ್ದಾರೆ.