ವಿಟ್ಲ: ಕಾರು - ಲಾರಿ ಢಿಕ್ಕಿ; ಕಾರಿನಲ್ಲಿದ್ದವರಿಗೆ ಗಂಭೀರ ಗಾಯ
Update: 2024-03-28 22:20 IST
ವಿಟ್ಲ: ಮರ ಸಾಗಾಟ ಲಾರಿಗೆ ಕಾರೊಂದು ಢಿಕ್ಕಿಯಾದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರುನಲ್ಲಿ ಗುರುವಾರ ರಾತ್ರಿ ನಡೆದಿದೆ.
ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ.