ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯೆ ಗುಲಾಬಿ ಅನಂತ ರೈ ನಿಧನ

Update: 2024-04-24 05:26 GMT

ಪುತ್ತೂರು, ಎ.24: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಿವಾಸಿ ದಿ. ಪಟೇಲ್ ಅನಂತ ರೈಯವರ ಪತ್ನಿ ಗುಲಾಬಿ ಅನಂತ ರೈ (88) ವಯೋಸಹಜ ಅಸೌಖ್ಯದಿಂದಾಗಿ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.

ಕೋಡಿಂಬಾಡಿ ಪಂಚಾಯತ್ ಮಾಜಿ ಸದಸ್ಯರಾಗಿ, ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದ ಗುಲಾಬಿ ರೈ ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News