ಮಂಗಳೂರು: ಚಿನ್ನ ಸಾಗಾಟಕ್ಕೆ ಯತ್ನ; ಆರೋಪಿ ಸೆರೆ

Update: 2024-04-28 15:48 GMT

ಮಂಗಳೂರು: ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ಕ್ಯಾರಟ್‌ನ 750 ಗ್ರಾಂ. ತೂಕದ 54.30 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಎ.27ರಂದು ದಮಾಮ್‌ನಿಂದ ವಿಮಾನದಲ್ಲಿ ಬಂದಿಳಿದ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆತನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಗುದನಾಳದಲ್ಲಿ 3 ಅಂಡಾಕಾರದ ವಸ್ತುಗಳು ಪತ್ತೆಯಾಗಿದ್ದು, ಅದರಲ್ಲಿ ಚಿನ್ನ ವನ್ನು ಪೇಸ್ಟ್ ರೂಪದಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ. ಆತನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News