×
Ad

ಸ್ಪೀಕರ್ ಯುಟಿ ಖಾದರ್‌ರ ಸಹೋದರನ ಪುತ್ರಿಯ ಮದುವೆ ಸಮಾರಂಭದಲ್ಲಿ ಗಣ್ಯರು ಭಾಗಿ

Update: 2024-05-25 20:56 IST

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಮರ್ಹೂಂ ಯು.ಟಿ.ಫರೀದ್ ಅವರ ಮೊಮ್ಮಗಳು, ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಅವರ ಸಹೋದರ ಡಾ.ಯು.ಟಿ. ಇಮ್ತಿಯಾಝ್ ಅಲಿ ಮತ್ತು ಅಸ್ಮಿನಾ ದಂಪತಿಯ ಪುತ್ರಿ ಹವ್ವಾ ತನ್ಹಾ ಅವರ ವಿವಾಹವು ನಗರದ ಡಾ.ಟಿಎಂಎ ಪೈ ಕನ್ವೆನ್‌ಶನ್ ಸೆಂಟರ್‌ನಲ್ಲಿ ಶನಿವಾರ ನಡೆಯಿತು.

ಉದ್ಯಮಿ ಉಳ್ಳಾಲದ ಎಚ್.ಎಸ್. ನಿಸಾರ್‌ ಅವರ ಪುತ್ರ ನಶ್ವಾನ್ ಹಮೀದ್ ಅವರು ಹವ್ವಾ ತನ್ಹಾರನ್ನು ವರಿಸಿದರು. ಈ ಅದ್ದೂರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಗಣ್ಯರು ನವ ವಧು-ವರರನ್ನು ಹರಸಿದರು.


ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಝೀರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಚಿವರಾದ ಡಾ. ಪರಮೇಶ್ವರ್, ಮಹದೇವಪ್ಪ, ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಶರಣ್ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಡಾ.ಸಿ.ಆರ್.ನಸೀರ್ ಅಹ್ಮದ್, ಶಾಸಕರಾದ ಅಶೋಕ್ ಕುಮಾರ್ ರೈ, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ ಮತ್ತಿತರರು ಪಾಲ್ಗೊಂಡಿದ್ದರು.



















Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News