×
Ad

ಬೆಳ್ತಂಗಡಿ : ಮನೆಯ ಕೆರೆಗೆ ಬಿದ್ದು ನವ ವಿವಾಹಿತ ಮೃತ್ಯು

Update: 2024-05-26 12:35 IST

ಬೆಳ್ತಂಗಡಿ : ನವ ವಿವಾಹಿತ ವ್ಯಕ್ತಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ  ಶನಿವಾರ ರಾತ್ರಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ.

ಶೈಲೇಶ್ ಶೆಟ್ಟಿ(38) ಮೃತ ವ್ಯಕ್ತಿ. ಕೃಷಿಕರಾಗಿದ್ದ ಇವರು  ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ತಮ್ಮ ಮನೆಯ ಕೆರೆಗೆ ಮೇ.25  ಶನಿವಾರ ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ,  ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News