ಮಂಗಳೂರು: ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು
Update: 2024-05-26 22:12 IST
ಮಂಗಳೂರು, ಮೇ 26: ಟ್ಯಾಂಕರ್ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನ ಸಮೀಪದ ಲೋಹಿತ್ ನಗರ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಗೌರವ್ ಎಚ್.(29) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.
ಇವರುಕೂಳೂರಿನಿಂದ ಬೋಳಾರ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಹಿಂದಿನಿಂದ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಗೌರವ್ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಟ್ಯಾಂಕರ್ ಅವರ ಮೇಲೆಯೇ ಹರಿದು ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ಗೌರವ್ ಅವರು ಕೂಳೂರಿನ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸಾಗುವ ವೇಳೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಾಫಿಕ್ ಉತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.