×
Ad

ಕರಾವಳಿಯಲ್ಲಿ ಭಾರಿ ಮಳೆ | ಬಂಟ್ವಾಳ ತಾಲೂಕಿನ ಹಲವೆಡೆ ಆಸ್ತಿ ಹಾನಿ

Update: 2024-06-26 15:44 IST

ಬಂಟ್ವಾಳ : ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಜೋರಾಗಿ ಮಳೆಯಾಗುತ್ತಿದ್ದು ತಾಲೂಕಿನ ವಿವಿಧೆಡೆ ಮನೆ, ಕೃಷಿ ಹಾಗೂ ಗುಡ್ಡೆ ಜರಿತದಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ.

ಕೆದಿಲ ಗ್ರಾಮದ ಗಾಂಧಿ ನಗರ ನಿವಾಸಿ ಪೂವಕ್ಕ ಅವರ ವಾಸ್ತವ್ಯದ ಮನೆ ಮೇಲೆ ಮರ ಬಿದ್ದು ಹಂಚುಗಳ ಜೊತೆ ಸಿಮೆಂಟ್ ಸೀಟುಗಳು ಜಖಂಗೊಂಡಿದೆ.

ನೆಟ್ಲ ನಿಟಿಲೇಶ್ವರ ದೇವಾಲಯದ ಬಳಿಯ ಮನೆಯ ಕಂಪೌಂಡ್ ಗೆ ಮರಬಿದ್ದು ಹಾನಿಯಾಗಿದೆ.

ಗೋಳ್ತಮಜಲು ಗ್ರಾಮದ ನೆಟ್ಲ ಧನಂಜಯ ಗಟ್ಟಿಯವರ ವಾಸ್ತವ್ಯದ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದ್ದಲ್ಲದೆ ಮನೆಯ ಕಂಪೌಂಡ್ ಗೂ ಹಾನಿಯಾಗಿದೆ.

ನರಿಕೊಂಬು ಗ್ರಾಮದ ಮಾಣಿಮಜಲು ಎಂಬಲ್ಲಿ ರಾಮಚಂದ್ರ ಗೌಡ ಎಂಬವರ ಮನೆಯ ಸಮೀಪದ ಗುಡ್ಡದ ಮಣ್ಣು ಜರಿದು ಶೌಚಾಲಯದ ಪಿಟ್ ಗುಂಡಿಯ ಮೇಲೆ ಮಣ್ಣು ಬಿದ್ದು ಹಾನಿಯಾಗಿದೆ.

ನರಿಕೊಂಬು ಗ್ರಾಮದ ಮರ್ಲಿಮಾರು ಎಂಬಲ್ಲಿ ಭತ್ತದ ಗದ್ದೆಯಲ್ಲಿ ನೀರು ಶೇಖರಣೆಯಾಗಿ ಕೃಷಿಗೆ ಹಾನಿಯಾಗಿದೆ.

ಇನ್ನೂ ಅನೇಕ ಕಡೆಗಳಲ್ಲಿ ಹಾನಿಯುಂಟಾಗಿರುವ ಸಾಧ್ಯತೆಗಳಿದ್ದು,ಇನ್ನಷ್ಟೇ ವರದಿಯಾಗಬೇಕಿದೆ.

ಮಾಹಿತಿ ತಿಳಿದ ಎಲ್ಲಾ ‌ಕಡೆಗಳಿಗೆ ಸಂಬಂಧಪಟ್ಟ ತಾಲೂಕಿನ‌ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ‌ನಡೆಸಿ ಪರಿಹಾರ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ̤


Delete Edit


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News