×
Ad

ಹರೇಕಳ: ನ್ಯೂಪಡ್ಪು ಮಸೀದಿಯ ತಡೆಗೋಡೆ ಕುಸಿತ

Update: 2024-06-26 22:07 IST

ಹರೇಕಳ: ಗ್ರಾಮದ ನ್ಯೂಪಡ್ಪು ತ್ವಾಹ ಜುಮಾ ಮಸೀದಿಯ ತಡೆಗೋಡೆ ಕುಸಿದು ಬಿದ್ದಿದೆ. ನಿನ್ನೆಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ತಡೆಗೋಡೆ ಶಿಥಿಲಗೊಂಡು ಇಂದು ರಾತ್ರಿ ಕುಸಿದು ಬಿದ್ದಿದೆ.

ತಡೆಗೋಡೆ ಕುಸಿದ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ, ಜನ ಸಂಚಾರವಿರದೇ ದೊಡ್ಡ ಅನಾಹುತ ತಪ್ಪಿದೆ. ಸ್ಥಳಕ್ಕೆ ಹರೇಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಮಜೀದ್, ಪಂಚಾಯತ್ ಸದಸ್ಯರಾದ ಬದ್ರುದ್ದೀನ್, ಅಬ್ದುಲ್ ಸತ್ತಾರ್, ಅಬ್ದುಲ್ ಬಶೀರ್ SM ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭ ತ್ವಾಹ ಜುಮಾ ಮಸ್ಜಿದ್ ಆಡಳಿತ ಕಮಿಟಿ ಮೊಹಲ್ಲಾದ ಯುವಕರೊಂದಿಗೆ ಸೇರಿಕೊಂಡು ರಸ್ತೆಯ ಅಡೆತಡೆಯನ್ನು ಸರಿಪಡಿಸುವಲ್ಲಿ ಯಶಸ್ವಿಯಾಗಿದೆ. ಸೂಕ್ತ ಪರಿಹಾರಕ್ಕೆ ಮಸೀದಿ ಆಡಳಿತ ಕಮಿಟಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದೆ.








Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News