×
Ad

ಕಾವೂರು ಸೂಜಿಕಲ್ ಗುಡ್ಡ ಕುಸಿತ: ನಿವಾಸಿಗಳ ಸ್ಥಳಾಂತರಕ್ಕೆ ದ.ಕ. ಡಿಸಿ ಸೂಚನೆ

Update: 2024-06-27 21:55 IST

ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯ ಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.

ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಮನೆ ಕಟ್ಟಡ ನಿರ್ಮಿಸಲು ಮಣ್ಣು ಅಗೆದ ಕಾರಣ ಅನೇಕ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳನ್ನು ಬೇರೆ ಕಡೆ ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಡಿಸಿ ನಿರ್ದೇಶಿಸಿದರು. ಅಲ್ಲದೆ ಖಾಸಗಿ ಮನೆಯ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಲು ಸೂಚಿಸಿದರು.

ಬಳಿಕ ಕೆಂಜಾರು ಶ್ರೀ ದೇವಿ ಕಾಲೇಜು ಆವರಣದಲ್ಲಿ ಉಂಟಾದ ಭೂಕುಸಿತ, ಮರವೂರು ಅಂತೋನಿಕಟ್ಟೆ ಎಂಬಲ್ಲಿ ಕಾಂಕ್ರಿಟ್ ತಡೆಗೋಡೆ ಕುಸಿದ ಪ್ರದೇಶಗಳಿಗೆ ಭೇಟಿ ನೀಡಿ ಡಿಸಿ ಪರಿಶೀಲಿಸಿದರು.

ಸುರತ್ಕಲ್ ಬಾಳ ಸಮೀಪ ಐಎಸ್‌ಪಿಆರ್‌ಎಲ್‌ಗೆ ಸೇರಿದ ಪೈಪ್‌ಲೈನ್ ಹಾದುಹೋದ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ತುರ್ತು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಪಕ್ಕದಲ್ಲಿ ಹಾದು ಹೋಗಿ ರುವ ಸಾರ್ವಜನಿಕ ರಸ್ತೆಯ ಸಮೀಪ ತಡೆ ಬೇಲಿ ಹಾಕಲು ತಿಳಿಸಿದರು.

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಮತ್ತಿತರರಿದ್ದರು.







 


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News