×
Ad

ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ವಿದೇಶಿ ವ್ಯಾಸಂಗ ಮಾಹಿತಿ ಶಿಬಿರ

Update: 2024-06-29 22:17 IST

ಮಂಗಳೂರು: ವಿದೇಶಗಳಲ್ಲಿ ಶಿಕ್ಷಣ ಪಡೆದರೆ ಸಾಕಾಗದು, ವಿದೇಶದಲ್ಲಿ ಶಿಕ್ಷಣ ಪಡೆದವರು ಹುಟ್ಟೂರಿನಲ್ಲಿ ಉದ್ಯಮ ಆರಂಭಿಸಿ 10 ಮಂದಿಗೆ ಉದ್ಯೋಗ ನೀಡಿದರೆ ಮಾತ್ರ ವಿದೇಶಿ ಶಿಕ್ಷಣ ಸಾರ್ಥಕ ಆಗುತ್ತದೆ ಎಂದು ಅಖಿಲ ಭಾರತ ಬ್ಯಾರಿ ಪರಿಷತ್ ಸಲಹೆಗಾರ ಬಿ.ಎ.ಮಹಮ್ಮದ್ ಹನೀಫ್ ಹೇಳಿದರು.

ಅವರು ಅಖಿಲ ಭಾರತ ಬ್ಯಾರಿ ಪರಿಷತ್ ಇದರ ಆಶ್ರಯದಲ್ಲಿ ನಗರದ ನ್ಯಾಷನಲ್ ಟ್ಯುಟೋರಿಯಲ್ ಸಭಾಂಗಣದಲ್ಲಿ ವಿದೇಶದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ವ್ಯಾಸಂಗ ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಸಾಲ ಸೌಲಭ್ಯಗಳ ಬಗ್ಗೆ ಹಮ್ಮಿಕೊಂಡಿದ್ದ ವಿದೇಶಿ ವ್ಯಾಸಂಗ ಮಾಹಿತಿ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಯು.ಚ್.ಖಾಲಿದ್ ಉಜಿರೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ಯಾರಿ ಪರಿಷತ್ ನಿಂದ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮನಪಾ ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತಬೈಲ್ ಮಾತನಾಡಿ ವಿದೇಶಿ ಶಿಕ್ಷಣ ಹಕ್ಕು ಅಲ್ಲ, ಅದೊಂದು ಅವಕಾಶ ಅಷ್ಟೇ.ಅದನ್ನು ಸದುಪಯೋಗ ಪಡಿಸಿಕೊಂಡು ಬರಬೇಕು ಎಂದು ಕರೆ ನೀಡಿದರು.

ಅಖಿಲ ಭಾರತ ಬ್ಯಾರಿ ಪರಿಷತ್ ನ ಸಲಹೆ ಗಾರ, ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಯೂಸುಫ್ ವಕ್ತಾರ್ ವಿದೇಶ ಗಳಲ್ಲಿ ವಿವಿ ಗಳಲ್ಲಿ ವ್ಯಾಸಂಗ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ ಉಪಾಧ್ಯಕ್ಷ ಟಿ.ಎಂ.ಶಹೀದ್,ಡಾ. ಸಿದ್ದೀಕ್ ಅಡ್ಡೂರು, ಮಹಮ್ಮದ್ ಹನೀಫ್ ಗ್ರೀನ್ ವ್ಯೂ, ಹುಸೈನ್ ಕಾಟಿಪಳ್ಳ, ಅಬೂಬಕ್ಕರ್ ಜಲ್ಲಿ, ಹಮೀದ್ ಕಿನ್ಯ ಮತ್ತಿತರರು ಉಪಸ್ಥಿತರಿದ್ದರು.

ಅಖಿಲ ಭಾರತ ಬ್ಯಾರಿ ಪರಿಷತ್ ಸಂಘಟನಾ ಕಾರ್ಯದರ್ಶಿ ಬಶೀರ್ ಕಲ್ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News