×
Ad

ಗುಂಡ್ಯ ಬಳಿ ಸರಣಿ ಅಪಘಾತ: ಬಸ್‍ಗಳ ಮುಖಾಮುಖಿ ಢಿಕ್ಕಿ

Update: 2024-06-29 22:27 IST

ಉಪ್ಪಿನಂಗಡಿ: ಈಚರ್ ಲಾರಿ ಹಾಗೂ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಐರಾವತ ಹಾಗೂ ರಾಜಹಂಸ ಬಸ್‍ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಬಸ್ ಚಾಲಕ ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಜೂ.29ರಂದು ಸಂಜೆ ನಡೆದಿದೆ.

ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ ಅನ್ನು ಮಂಗಳೂರಿನಿಂದ ಬೆಂಗಳೂರಿಗೆ ಪಾರ್ಸೆಲ್ ಸಾಗಾಟ ಮಾಡುತ್ತಿದ್ದ ಈಚರ್ ಲಾರಿಯು ಓವರ್ ಟೇಕ್ ಮಾಡುವ ಬರದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರಾಜಹಂಸ ಬಸ್ಸಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಈ ಸಂದರ್ಭದಲ್ಲಿ ರಾಜಹಂಸ ಬಸ್ ಹಾಗೂ ಐರಾವತ ಬಸ್ ನಡುವೆ ಕೂಡಾ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಐರಾವತ ಬಸ್ ಚಾಲಕ ಕಿರಣ್ ಮೇಸ್ತ ಎಂಬವರು ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿದರು. ಪರಶುರಾಮ ಕ್ರೇನ್ ತಂಡದವರು ರಸ್ತೆಯಿಂದ ವಾಹನ ತೆರವುಗೊಳಿಸಲು ಸಹಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News